ಮೂಶಿಕ ವಾಹನ ಮೋಹಕ ಹಸ್ತ
ಚಾಮರ ಕರ್ಣ ವಿಲಂಬಿತ ಸೂತ್ರ
ವಾಮನ ರೂಪ ಮಹೇಶ್ವರ ಪುತ್ರ ವಿಘ್ನ ವಿನಾಶಕ ಪಾದ ನಮಸ್ತೆ
ನಮಸ್ತೆ ನಮಸ್ತೆ ನಮಃ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ನಿನ್ನ ನಂಬಿದ ಜನಕೆ ಇಹುದಯ್ಯ ಎಲ್ಲಾ ಸುಖ
ತಂದೆ ಕಾಯೊ ನಮ್ಮ ಕರಿಮುಖ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಎಲ್ಲರೂ ಒಂದಾಗಿ ನಿನ್ನ
ನಮಿಸಿ ನಲಿಯೋದು ನೋಡೋಕೆ ಚೆನ್ನ
ಎಲ್ಲರೂ ಒಂದಾಗಿ ನಿನ್ನ
ನಮಿಸಿ ನಲಿಯೋದು ನೋಡೋಕೆ ಚೆನ್ನ
ಗರಿಕೆ ತಂದರೆ ನೀನು ಊ…ಆ…
ಗರಿಕೆ ತಂದರೆ ನೀನು ಕೊಡುವೆ ವರವನ್ನ
ಗತಿ ನೀನೆ ಗಣಪನೆ ಕೈ ಹಿಡಿಯೊ ಮುನ್ನ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಸೂರ್ಯನೆದುರಲ್ಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ
ಓಡುವುದು ಭೀತಿ
ಸೂರ್ಯನೆದುರಲ್ಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ
ಓಡುವುದು ಭೀತಿ
ನೀಡಯ್ಯ ಕಷ್ಟಗಳ ಗೆಲ್ಲುವ ಶಕ್ತಿ
ತೋರಯ್ಯ ನಮ್ಮಲ್ಲಿ ನಿನ್ನಯ ಪ್ರೀತಿ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ನಿನ್ನ ನಂಬಿದ ಜನಕೆ ಇಹುದಯ್ಯ ಎಲ್ಲಾ ಸುಖ
ತಂದೆ ಕಾಯೋ ನಮ್ಮ ಕರಿಮುಖ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಬೆನಕ ಬೆನಕ ಏಕದಂತ
ಪಚ್ಚೆಕಲ್ಲು ಪಾಣಿಮೇಟು ಒಪ್ಪುವ ವಿಘ್ನೇಶ್ವರ
ನಿನಗೆ ಇಪ್ಪತೊಂದು ನಮಸ್ಕಾರಗಳು

Comments
Post a Comment